Hubballi News: ಹುಬ್ಬಳ್ಳಿ: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸಂಭವಿಸಿದ ಪರಿಣಾಮ ಮೂರು ಬೈಕ್ ಗಳು ನುಜ್ಜುಗುಜ್ಜಾಗಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಗಬ್ಬುರು ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಕಾರೊಂದು ಬಂಕಾಪುರ ಚೌಕ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದು ಎರಡು ಬೈಕ್ ಗಳನ್ನು ಎಳೆದುಕೊಂಡು ಹೋಗಿದೆ.
ಸ್ಥಳೀಯರ ಸಹಾಯದಿಂದ ಗಾಯಗೊಂಡ ಬೈಕ್ ಸವಾರನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಣಿಸಲಾಗಿದ್ದು, ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಅಪಘಾತ ಮಾಡಿದ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.ಕಾರು ಚಾಲಕ ಬ್ರೇಕ್ ಮೇಲೆ ಕಾಲು ಇಡುವ ಬದಲು ಎಕ್ಸಿಲೇಟರ್ ಮೇಲೆ ಕಾಲು ಇಟ್ಟ ಪರಿಣಾಮ ಈ ಅಪಘಾತ ಸಂಭವಿಸಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ
‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’
ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್