ಸೂಸೈಡ್ ನೋಟ್ ಬರೆದಿಟ್ಟು ತನ್ನ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಹೆಸ್ಕಾಂ ಸಿಬ್ಬಂದಿ..!

Hubballi News: ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯ ನವನಗರದ ಹೆಸ್ಕಾಂ ಕಚೇರಿಯಲ್ಲಿ ಇಂದು ನಡೆದಿದೆ.

ಮುನೀರ್ ಮುಲ್ಲಾ ಅನ್ನೋರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಬರೆದಿಟ್ಟು ತಮ್ಮ ಕಛೇರಿಯಲ್ಲಿ ನೇಣಿಗೆ ಶರಣಾಗಲು ಮುಂದಾಗಿದ್ದಾರೆ, ಅದೃಷ್ಟವಶಾತ್ ತಾನು ಹಾಕಿಕೊಂಡ ನೇಣು ಬಿಚ್ಚಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೆಸ್ಕಾಂ ಎಂ ಡಿ ಅವರ ಕಾರ್ ಚಾಲಕ ಆಸಿಫ್ ಶಿವಳ್ಳಿ ಹಾಗೂ ಮಹಾಲಿಂಗಪ್ಪ ಇಬ್ಬರು ನನ್ನ ಸಾವಿಗೆ ಕಾರಣ. ನಕಲಿ ಪೊಲೀಸರನ್ನು ಕಳಸಿ ನನಗೆ ಸಾಕಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಾಗೂ ಬ್ಲ್ಯಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ನನಗೆ ಸಾಕಷ್ಟು ತೊಂದರೆ ನೀಡಿದ್ದಾರೆ ಎಂದು ಹೆಸ್ಕಾಂ ಎಂ ಡಿ ಹಾಗೂ ಪೋಲಿಸ್ ಆಯುಕ್ತರಿಗೆ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಬೇಟಿ ನೀಡಿ, ಆತ್ಮಹತ್ಯೆಗೆ ಯತ್ನಿಸಿದ ಹೆಸ್ಕಾಂ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

About The Author