Political News: 32 ವರ್ಷದ ಹಳೆ ಕೇಸ್ ರಿಓಪನ್ ಮಾಡಿಸಿದ್ದಕ್ಕಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನಾಳೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ, ಹಲವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಬೇಕಿದ್ದರೆ ನನ್ನನ್ನು ಬಂಧಿಸಲಿ, ಕೇಸ್ ದಾಖಲಿಸಲಿ ಎಂದು ಸವಾಲ್ ಹಾಕಿದ್ದಾರೆ.
ಅಲ್ಪಸಂಖ್ಯಾತರ ಮೇಲೆ ಮಮಕಾರ ಹಿಂದೂಗಳೆಂದರೆ ತಾತ್ಸಾರ. ಅಲ್ಪಸಂಖ್ಯಾತರ ಮೇಲೆ ಎಲ್ಲಿಲ್ಲದ ಪ್ರೀತಿ, ಅಕ್ಕರೆ ತೋರುವ ಸಿಎಂ ಸಿದ್ದರಾಮಯ್ಯನವರಿಗೆ ರಾಮಭಕ್ತರ ಮೇಲೆ ಏಕಿಷ್ಟು ದ್ವೇಷ, ಹಗೆತನ? ಕೇಸರಿ ಬಣ್ಣ, ಕುಂಕುಮ ಕಂಡರೆ ಕಾಂಗ್ರೆಸ್ ಪಕ್ಷಕ್ಕೆ ಏಕಿಷ್ಟು ಅಸಹ್ಯ? ಹಳೇ ಕೇಸುಗಳಿಗೆ ಮರುಜೀವ ನೀಡಿ ಕರಸೇವಕರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವ ಹಿಂದು ವಿರೋಧಿ ಕಾಂಗ್ರೆಸ್ ಸರ್ಕಾರದ ದೌರ್ಜನ್ಯ ಅತ್ಯಂತ ಖಂಡನೀಯ.
ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ನಾಳೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ನಾನು ಪಾಲ್ಗೊಳ್ಳಲಿದ್ದೇನೆ. ಸ್ವಯಂಸೇವಕರು, ಕರಸೇವಕರು, ಹಿಂದೂ ಕಾರ್ಯಕರ್ತರ ವಿರುದ್ಧ ಎಲ್ಲೇ ದೌರ್ಜನ್ಯ ನಡೆದರೂ ಅವರ ಬೆನ್ನಿಗೆ ನಿಲ್ಲುತ್ತೇನೆ. ಕಾಂಗ್ರೆಸ್ ಸರ್ಕಾರ ನನ್ನನ್ನೂ ಬೇಕಿದ್ದರೆ ಬಂಧಿಸಲಿ, ಕೇಸು ದಾಖಲಿಸಲಿ ಎಂದು ಅಶೋಕ್ ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್
ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ
‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’




