Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದರು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇನ್ನು ಅಂತಿಮವಾಗಿಲ್ಲ, ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿರುವ ಕಾಂಗ್ರೆಸ್ ಪಾಳಯದಲ್ಲಿ ಇದೀಗ ರಜತ್ ಉಳ್ಳಾಗಡ್ಡಿ ಮಠ ಹಾಗೂ ಶಿವಲೀಲಾ ಕುಲಕರ್ಣಿ ಹೆಸರು ಅಂತಿಮ ಎರಡರಲ್ಲಿ ಇದ್ದು ಇದರ ಬೆನ್ನಲ್ಲೇ ಸಚಿವರ ಓಡಾಟ ಆರಂಭವಾಗಿದೆ.
ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ
ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್
‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

