Friday, August 8, 2025

Latest Posts

‘ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ’

- Advertisement -

Political News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಹಲವು ಹೆಣ್ಣು ಮಕ್ಕಳಿಗೆ, ಕೆಲಸಕ್ಕೆ ಹೋಗಲು, ಬೇರೆ ಊರಿಗೆ ಹೋಗಲು ಹೀಗೆ ಅನೇಕ ಕೆಲಸಗಳಿಗೆ ಉಪಯೋಗಕಾರಿಯಾಗಿದೆ. ಆದರೆ ಶಕ್ತಿ ಯೋಜನೆಯಿಂದಾಗಿ, ಹಲವು ವಿದ್ಯಾರ್ಥಿಗಳಿಗೆ, ಶಾಲೆಗೆ ಹೋಗಲು ಸರಿಯಾಗಿ ಬಸ್‌ಗಳೇ ಸಿಗುತ್ತಿಲ್ಲ. ಈ ವಿಷಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಅಸಮಾಧಾನ ಹೊರಹಾಕಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ..

ಶಕ್ತಿ ಯೋಜನೆಯ ಪರಿಣಾಮ ನಿತ್ಯವೂ ಶಾಲೆಗೆ ಹೋಗಬೇಕಾಗಿರುವ ಮಕ್ಕಳಿಗೆ ಬಸ್ಸುಗಳಲ್ಲಿ ಪ್ರಯಾಣಕ್ಕೆ ಸ್ಥಳಾವಕಾಶ ಸಿಗುತ್ತಿಲ್ಲ. ಶಿಕ್ಷಕರು, ಕಾರ್ಮಿಕರಿಗೂ ಇದೇ ದುಸ್ಥಿತಿ. ಆಟೋ, ಲಗೇಜ್ ಆಟೋ, ಗೂಡ್ಸ್ ವಾಹನಗಳನ್ನು ಹತ್ತಿ ಅಪಾಯಕಾರಿ ರಸ್ತೆಗಳಲ್ಲಿ ಮಕ್ಕಳು ಶಾಲೆಗೆ ಹೋಗಬೇಕು, ಮನೆಗೆ ವಾಪಸ್ಸು ಬರಬೇಕು.

ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲ ಎನ್ನುವ ವರದಿ ಆಘಾತಕಾರಿ. ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು.

ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ!! ಎಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

ಗೋದ್ರಾ ದುರಂತ ಮರುಕಳಿಸುತ್ತದೆ ಅಂದ್ರೆ ಏನು..? ಹಿಂದೂಗಳನ್ನು ಸುಡ್ತೀರಾ..?: ಬೆಲ್ಲದ್ ಪ್ರಶ್ನೆ..

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”

- Advertisement -

Latest Posts

Don't Miss