ವಿಪಕ್ಷ ನಾಯಕ ಆ‌ರ್.ಅಶೋಕ ಸೇರಿ ಶಾಸಕರನ್ನು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸ್‌

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನದ ಹಿನ್ನೆಲೆಯಲ್ಲಿ, ಇಂದು ಟೌನ್ ಪೊಲೀಸ್ ಠಾಣೆ ಎದುರಿಗೆ ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ರು. ಈ ವೇಳೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್‌ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿ, ಟಾಯರ್ ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಆರ್ ಅಶೋಕ್, ಶಾಸಕರಾದ ಮಹೇಶ್ ತೆಂಗಿನಕಾಯಿ ಹಾಗೂ ಅರವಿಂದ್ ಬೆಲ್ಲದ ರನ್ನ ವಶಕ್ಕೆ ಪಡೆಯಲು ಹರಸಾಹಸ ಪಟ್ಟಿದ್ದಾರೆ. ಈ ನಡುವೆ ಪೊಲೀಸರ ಜೊತೆ ವಾಗ್ವಾದಕ್ಕೆ ಬಿದ್ದ ಕಾರ್ಯಕರ್ತರು ಠಾಣೆಯ ಎದುರು ಹೈಡ್ರಾಮಾ ಸೃಷ್ಟಿಸಿದ್ದಾರೆ.

ಇದೇ ವೇಳೆ ಬಿಜೆಪಿ ಮಹಿಳಾ ಘಟಕದ ಮಹಿಳಾ ಕರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಎಲ್ಲ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಬಸ್‌ನಲ್ಲಿ ಹೊಸ ಸಿಆ‌ರ್ ಗೌಂಡ್‌ಗೆ ಕರೆದುಕೊಂಡು ಹೋಗಿದ್ದಾರೆ.

ಗೋದ್ರಾ ದುರಂತ ಮರುಕಳಿಸುತ್ತದೆ ಅಂದ್ರೆ ಏನು..? ಹಿಂದೂಗಳನ್ನು ಸುಡ್ತೀರಾ..?: ಬೆಲ್ಲದ್ ಪ್ರಶ್ನೆ..

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

“ರಾಮಭಕ್ತರನ್ನು ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”

About The Author