Friday, August 29, 2025

Latest Posts

ಗೋಧ್ರಾ ವಿವಾದಾತ್ಮಕ ಹೇಳಿಕೆ: ಹರಿಪ್ರಸಾದರನ್ನು ಬಂಧಿಸಿ ಎಂದ ಪ್ರಮೋದ್ ಮುತಾಲಿಕ್

- Advertisement -

Gadag News: ಗದಗ: ಗೋದ್ರಾ ಮಾದರಿಯಲ್ಲಿ ಘಟನೆಯಾಗುತ್ತದೆ ಎನ್ನುವುದರ ಬಗ್ಗೆ ಬಿ.ಕೆ. ಹರಿಪ್ರಸಾದ ಅವರಿಗೆ ಮಾಹಿತಿ ಇದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ಗಂಡಾಂತರ ನಿರ್ಮಾಣ ಮಾಡಿ, ಪ್ರಚೋದನೆ ಕೊಡುವ ಹೇಳಿಕೆ ಇದಾಗಿದೆ. ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್‌ಗೆ ಹೊಟ್ಟೆ ಉರಿ ಹೆಚ್ಚಿಸಿದೆ. ಹೊಟ್ಟೆ ಕಿಚ್ಚಿನಿಂದ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಗೋದ್ರಾ ಘಟನೆಯಲ್ಲಿ 57 ಮುಸ್ಲಿಮರನ್ನು ಜೀವಂತ ಸುಟ್ಟು ಹಾಕಲಾಗಿದೆ. ಇಂತಹ ಹೇಳಿಕೆ ನೀಡಿ ಮುಸ್ಲಿಮರಿಗೆ ಪ್ರಚೋದನೆ ಕೊಡುತ್ತಿದ್ದಾರಾ? ಅಥವಾ ಮುಸ್ಲಿಮರು ಮಾಡುವ ಕೆಲಸ ಹರಿಪ್ರಸಾದ ಅವರಿಗೆ ಗೊತ್ತಾಗಿದೆಯಾ? ಕಾಂಗ್ರೆಸ್‌ನವರೇ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಗೃಹ ಸಚಿವರು ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಏನಾದರೂ ಅಹಿತಕರ ಘಟನೆ ನಡೆದರೆ ಗೃಹ ಮಂತ್ರಿ ಹಾಗೂ ಸಿಎಂ ಸಿದ್ದರಾಮಯ್ಯನವರೆ ಕಾರಣವಾಗುತ್ತಾರೆ ಎಂದು ಹೇಳಿದರು.

ರಾಮಮಂದಿರ ಉದ್ಘಾಟನೆಗೆ ಇನ್ನೂ 20 ದಿನ ಬಾಕಿ ಇದೆ. ಜನ ಸಂತೋಷದಲ್ಲಿದ್ದಾರೆ. ಇದನ್ನು ಕಾಂಗ್ರೆಸ್‌ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹರಿಪ್ರಸಾದ ಅವರ ಹೇಳಿಕೆ ನೋಡಿದರೆ ಇವರೇ ಗಲಭೆಗೆ ಪ್ಲಾನ್‌ ಮಾಡುತ್ತಿದ್ದಾರೆ ಎನ್ನುವ ಬಲವಾದ ಸಂಶಯ ಕಾಡುತ್ತದೆ. ಕೂಡಲೇ ಬಿ.ಕೆ. ಹರಿಪ್ರಸಾದ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಡ್ರಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ ನಟಿಗೆ 5 ಲಕ್ಷ ವಂಚನೆ..

‘ಇಂಥವರನ್ನು ಬಂಧಿಸದೇ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ’

ಮಹಿಳೆಗೆ ನೆರವು: ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ ಸಚಿವ ಸಂತೋಷ್‌ ಲಾಡ್‌

- Advertisement -

Latest Posts

Don't Miss