ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ ಸಂತೋಷ್ ಲಾಡ್, ಜೋಶಿ ಅವರ ವಿರುದ್ಧ ಇಂದಿನಿಂದ ಪ್ರತಿಭಟನೆಗಳು ನಡೆಯಲಿವೆ. ಧಾರವಾಡ ಕ್ಷೇತ್ರ ಬುದ್ಧಿಜೀವಿಗಳ, ಪ್ರಗತಿಪರರ ಕ್ಷೇತ್ರ. ಇಂತಹ ಕ್ಷೇತ್ರವನ್ನು ಜೋಶಿ ಪ್ರತಿನಿಧಿಸುತ್ತಿದ್ದಾರೆ. ಜೋಶಿ ಅವರ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವವಿದೆ. ಆದರೆ, ಅವರು ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್‌ ಆಡಳಿತಕ್ಕೆ ಹೋಲಿಸಿದ್ದಾರೆ. ಇದು ಧಾರವಾಡ ಜನತೆಗೆ ಅಗೌರವ ತೋರಿದಂತೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಮಾಡಬಹುದು. ಆದರೆ, ತಾಲಿಬಾನ್, ಅಫ್ಘಾನಿಸ್ತಾನ ಆಡಳಿತಕ್ಕೆ ಹೋಲಿಕೆ ಮಾಡಿ ಟೀಕೆ ಮಾಡುವುದು ಸರಿಯಲ್ಲ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ವಾಪಾಸ್‌ ಪಡೆಯಬೇಕು ಎಂದು ಲಾಡ್ ಆಗ್ರಹಿಸಿದರು.

ಸಚಿವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅನೇಕ ಕಾಂಗ್ರೆಸ್‌ ಮುಖಂಡರು ಪಾಲ್ಗೊಂಡು ಕೇಂದ್ರ ಸಚಿವ ಜೋಶಿ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ಜೋಶಿ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

ಲೋಕಸಭಾ ಚುನಾವಣೆ ಸಲುವಾಗಿ ಬಿಜೆಪಿ ರಾಮಮಂದಿರ ಗಿಮಿಕ್: ಮಮತಾ ಬ್ಯಾನರ್ಜಿ

About The Author