Friday, November 22, 2024

Latest Posts

‘ರಾಮಮಂದಿರ ಉದ್ಘಾಟನೆ ಬಳಿಕ, ಒಂದು ದಿನ ಹೋಗಿ, ನಾನೂ ಅಯೋಧ್ಯಾ ರಾಮನ ದರ್ಶನ ಮಾಡುತ್ತೇನೆ’

- Advertisement -

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಿಂದ ದೂರವಿರಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ಬೆಂಬಲ ಸೂಚಿಸಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಹಾಗಾಗಿ ಬಿಜೆಪಿಯ ಕೆಲ ನಾಯಕರು, ಸಿದ್ದರಾಮಯ್ಯ ಹಿಂದೂ ವಿರೋಧಿ, ರಾಮ ವಿರೋಧಿ ಎಂದಿದ್ದರು. ಇದೀಗ ಮತ್ತೆ ಸಿಎಂ ಟ್ವೀಟ್ ಮಾಡುವ ಮೂಲಕ, ತಾನು ರಾಮ ವಿರೋಧಿಯೂ ಅಲ್ಲ, ಹಿಂದೂ ವಿರೋಧಿಯೂ ಅಲ್ಲ. ನಾನು ಉದ್ಘಾಟನೆಯಾದ ಬಳಿಕ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಮಾಡಿಬರುತ್ತೇನೆ ಎಂದಿದ್ದಾರೆ.

ರಾಮಲಲ್ಲ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂಬ ನಮ್ಮ ಪಕ್ಷದ ಹಿರಿಯ ನಾಯಕರ ನಿಲುವನ್ನು ಬೆಂಬಲಿಸುತ್ತೇನೆ ಎಂಬ ಹೇಳಿಕೆಯ ವಿರುದ್ಧ ರಾಜ್ಯದ ಬಿಜೆಪಿ ನಾಯಕರು ಯಥಾಪ್ರಕಾರ ನನ್ನನ್ನು ಹಿಂದು ವಿರೋಧಿ ಎಂದು ಚಿತ್ರಿಸಲು ನಾಲಗೆ ಹರಿಬಿಡುತ್ತಿದ್ದಾರೆ.

ನಾನು ಹಿಂದೂ ವಿರೋಧಿಯೂ ಅಲ್ಲ, ಶ್ರೀರಾಮಚಂದ್ರನ ವಿರೋಧಿಯೂ ಅಲ್ಲ. ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಿಜೆಪಿ ನಾಟಕ ಮಂಡಳಿಯ ಪ್ರದರ್ಶನವೆಲ್ಲ ಮುಗಿದ ನಂತರ ಅರಾಮವಾಗಿ ಒಂದು ದಿನ ನಾನು ಅಯೋಧ್ಯೆಗೆ ಹೋಗಿ ರಾಮ ಮಂದಿರಕ್ಕೂ ಭೇಟಿ ನೀಡಿ ಬರಬೇಕೆಂದು ತೀರ್ಮಾನ ಮಾಡಿದ್ದೇನೆ. ನನ್ನನ್ನು ಶ್ರೀ ರಾಮಚಂದ್ರನ ವಿರೋಧಿಯೆಂದು ಕತೆ ಕಟ್ಟುತ್ತಿರುವವರ ಜೊತೆಗೂ ಆ ಭೇಟಿಯ ಪೋಟೋಗಳನ್ನು ಹಂಚಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಈಗಾಗಲೇ ತಿಳಿಸಿರುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮ ಮಾಡಿರುವುದನ್ನು ಪ್ರತಿಭಟಿಸಿ ನಾವು ಆ ಸಮಾರಂಭದಿಂದ ದೂರ ಇದ್ದೇವೆಯೇ ಹೊರತು ನಾವೇನು ದೇವರು-ಧರ್ಮದ ವಿರೋಧಿಗಳಲ್ಲ.

ನಾವು ಮಾತ್ರವಲ್ಲ ಹಿಂದೂ ಧರ್ಮದ ಹಿರಿಯ ಸ್ವಾಮೀಜಿಗಳಾದ ಶಂಕರಾಚಾರ್ಯರು ಕೂಡಾ ಜನವರಿ 22ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಬಿಜೆಪಿ ಮತ್ತು ಆರ್.ಎಸ್.ಎಸ್ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ನನಗೂ ಇದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ನಮ್ಮ ಗ್ಯಾರಂಟಿ ಕಾಪಿ ಮಾಡಿ, ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’

ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?

‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’

- Advertisement -

Latest Posts

Don't Miss