Wednesday, September 24, 2025

Latest Posts

‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

- Advertisement -

Political News: ಕೆಲ ದಿನಗಳ ಹಿಂದೆ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನು ಕುರಿತು ಸ್ಲೀಪಿಂಗ್ ಸಿಎಂ ಎಂಬ ಅಭಿಯಾನ ಮಾಡಿ, ಪ್ರತಿದಿನ ಸಿಎಂ ನಿದ್ರಿಸುವಂತೆ ಫೋಟೋ ಟ್ವೀಟ್ ಮಾಡಿ, ವ್ಯಂಗ್ಯ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಟ್ವಿಟರ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ನಿದ್ರಿಸುವಂತೆ ಫೋಟೋ ಪೋಸ್ಟ್ ಮಾಡಿ, ಒಂದಿಷ್ಟು ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್ ಹೀಗಿದೆ.

ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ

ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.

ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ – ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ – ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ – ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…

ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!

ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು!

ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಟ್ವೀಟ್ ಮಾಡಿ ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ವ್ಯಂಗ್ಯವಾಡಿದ್ದಾರೆ.

ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

ಪಂಜಾಬ್ ಸಿಎಂ ಭಗವಂತ್ ಮನ್‌ಗೆ ಜೀವ ಬೆದರಿಕೆ ಹಾಕಿದ ಟೆರರಿಸ್ಟ್ ಪನ್ನು

ಕನಸಲ್ಲಿ ರಾಮ ಕಂಡನೆಂದು ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಮಹಿಳೆ..

- Advertisement -

Latest Posts

Don't Miss