ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Hassan News: ಹಾಸನ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಈ ಕಾರಣಕ್ಕೆ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾಾತಾವರಣ ನಿರ್ಮಾಣವಾಗಿದ್ದು, ಇಡೀ ಆಸ್ಪತ್ರೆಯಲ್ಲಿ ಹೊಗೆ ವ್ಯಾಪಿಸಿದೆ.

ಹಾಸನ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಇಡೀ ಆಸ್ಪತ್ರೆಯಲ್ಲಿ ಹೊಗೆ ತುಂಬಿದೆ. ಈ ಕಾರಣಕ್ಕೆ ಅಲ್ಲಿ ಇದ್ದ ಕೆಲ ರೋಗಿಗಳನ್ನು, ಅವರ ಕುಟುಂಬಸ್ಥರು ಆಸ್ಪತ್ರೆಯಿಂದ ಹೊರಗೆ ಕರೆತಂದಿದ್ದಾರೆ.

ಎಕ್ಸ್‌ರೇ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇನ್ನು ಘಟನೆ ಬಳಿಕ ಕೆಲ ಆಸ್ಪತ್ರೆ ಸಿಬ್ಬಂದಿ, ಕಿಟಕಿಯ ಗಾಜುಗಳನ್ನು ಒಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದು, ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತಂದು, ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆಗೆ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ: ಇಂಡುವಾಳು ಸಚ್ಚಿದಾನಂದ

ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್

ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

About The Author