Thursday, October 23, 2025

Latest Posts

ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

- Advertisement -

Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

- Advertisement -

Latest Posts

Don't Miss