Dharwad News: ಧಾರವಾಡ: ರಾಮಮಂದಿರದ ಫೋಟೋದಲ್ಲಿ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಹಿಂದೂಗಳು ಆಕ್ರೋಶ ಹೊರಹಾಕಿದ್ದಾರೆ.
ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕ ಸದ್ದಾಮ್ ಹುಸೇನ್, ರಾಮಮಂದಿರದ ಮೇಲೆ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಲ್ಲದೇ, ಇಸ್ಲಾಮಿಕ್ ಪವರ್ ಎಂದು ಬರೆದುಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಆದರೆ ಈ ಬಗ್ಗೆ ಸ್ಥಳೀಯ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಾತ್ರಿ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ನುಗ್ಗಿ, ಮೈದಾನದಲ್ಲಿನ ಗುಂಬಜ್ ಕೆಡವಿದ್ದಾರೆ. ಐದು ಗುಂಬಜ್ ಪೈಕಿ ಒಂದಕ್ಕೆ ಹಾನಿ ಮಾಡಿದ್ದಾರೆ. ಘಟನೆ ಕುರಿತಂತೆ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ, ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಗುಂಬಜ್ ದುರಸ್ತಿ ಕಾರ್ಯ ನಡೆಸಿದ್ದು, ಸ್ಥಳಕ್ಕೆ ಉತ್ತರವಲಯ ಐಜಿಪಿ ವಿಕಾಸ್ ಕುಮಾರ್ ಭೇಟಿ ನೀಡಿ, ಧಾರವಾಡ ಎಸ್ಪಿ ಡಾ. ಗೋಪಾಲ ಬ್ಯಾಕೋಡರಿಂದ ಮಾಹಿತಿ ಪಡೆದಿದ್ದಾರೆ.
ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ
ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!




