Friday, October 31, 2025

Latest Posts

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

- Advertisement -

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ.

ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ ನಮ್ಮ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿದ್ದೆವು. ಆದ್ರೆ ಅವರು ಈ ರೀತಿ ಏಕಾಏಕಿ ಪಕ್ಷ ತೊರೆದಿದ್ದಾರೆ. ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿಗಳು ಅನ್ನಿಸುತ್ತೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಶೆಟ್ಟರ್ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದ್ರೆ ಅವರು ಪಕ್ಷ ಬಿಟ್ಟು ಹೋದದ್ದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಪಕ್ಷ ತೊರೆದ ವಿಚಾರವಾಗಿ ಸಂತೋಷ್ ಲಾಡ್ ನಗುತ್ತಲೇ ವ್ಯಂಗ್ಯವಾಡಿದ್ದಾರೆ.

ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?

ಶೆಟ್ಟರ್ ಮರಳಿ ಬಿಜೆಪಿಗೆ ಹೋಗಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್, ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ: ಸಿಎಂ

- Advertisement -

Latest Posts

Don't Miss