ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

Political News: ಮಡಿಕೇರಿ ನಗರದಲ್ಲಿ ನೂತನ ಪೊಲೀಸ್ ಅಧೀಕ್ಷಕರ ಕಛೇರಿ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ. ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಪೊಲೀಸ್ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ ಹರಿಸಲಿದೆ. ಚಿಕ್ಕಹೆಜ್ಜಾಲದಲ್ಲಿ ಪೊಲೀಸ್ ತರಬೇತಿ ಶಾಲೆ ಸ್ಥಾಪನೆಯಾಗಬೇಕೆಂಬ ಬೇಡಿಕೆ ನನ್ನ ಗಮನಕ್ಕೆ ಬಂದಿಲ್ಲ, ಬಂದರೆ ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಗುಂಡೂರಾವ್ ಬಡಾವಣೆಯಲ್ಲಿನ ಪೊಲೀಸ್ ಇಲಾಖೆ ಕಟ್ಟಡಕ್ಕೆ ಅಡಿಪಾಯ ಹಾಕಿದ್ದು, ಅದಕ್ಕೆ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವುಗೊಂಡ ನಂತರ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

ಘರ್ ವಾಪ್ಸಿ ವೇಳೆ ಜಗದೀಶ್ ಶೆಟ್ಟರ್ ಏನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಮಹೇಶ್ ಟೆಂಗಿನಕಾಯಿ

‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’

About The Author