Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಅವಳಿ ನಗರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಜನಜಾಗೃತಿ ಅಂದೋಲನ ಕಾರ್ಯಕ್ರಮವನ್ನು ರೈತ ಸೇನಾ ಕರ್ನಾಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಜನೆವರಿ 29 ರಂದು ಬೆಳಗ್ಗೆ 11.30 ರಂದು ನಗರದ ಶ್ರೀ ಮೂರುಸಾವಿರ ಮಠದಿಂದ ಪಾದಯಾತ್ರೆ ನಡೆಸಿ ನಂತರ ತಹಶಿಲ್ದಾರ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ವಿರೇಶ್ ಸೊಬರದಮಠ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರುಸಾವಿರಮಠದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಚೆನ್ನಮ್ಮ ವೃತ್ತ ತಲುಪಿ ನಂತರ ತಹಶಿಲ್ದಾರ ಕಛೇರಿಯವರೆಗೆ ಪಾದಯಾತ್ರೆ ನಡೆಯಲಿದೆ ಎಂದರು.
ಮಹಾದಾಯಿ ಯೋಜನೆಗೆ ಹಲವಾರು ಸಂಘಟನೆಗಳೂ ಕೈಜೋಡಿಸಿ ಯಶಸ್ವಿ ಹಂತಕ್ಕೆ ತಲುಪಿದ್ದು, ಈ ನಿಟ್ಟಿನಲ್ಲಿ ಹು-ಧಾ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಎಲ್ಲಾ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನಗೆಳು, ವಿವಿಧ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದರು.
ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಎಲ್ಲರೂ ಪಕ್ಷಾತೀತವಾಗಿ ಭಾಗವಹಿಸಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ ಅವರು, ಅಂದು 3೦೦ ಹೆಚ್ಚು ಜನರು ಭಾಗಿಯಾಗಲಿದ್ದಾರೆ ಎಂದರು.
‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’
ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?




