ರಾಷ್ಟ್ರಪತಿಯನ್ನು ಏಕವಚನದಲ್ಲಿ ಸಂಬೋಧಿಸಿದ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ

Political News: ಚಾಮರಾಜನಗರದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದರು. ಇದೀಗ ಸ್ಪಷ್ಟನೆ ನೀಡಿ, ಟ್ಲೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಷಾದ ವ್ಯಕ್ತಪಡಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ.

ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.

ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ

9ನೇಯ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಶೆಟ್ಟರ್‌ಗೆ ಗಂಡಸ್ತನ ಇದ್ರೆ ಲೋಕಸಭೆ ಟಿಕೆಟ್ ಗಿಟ್ಟಿಸಿಕೊಂಡು ತೋರಿಸಲಿ: ಶರಣಪ್ಪ ಕೊಟಗಿ ಸವಾಲು

About The Author