ಧಾರವಾಡದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Dharwad News: ಧಾರವಾಡ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನೆನಪಿಗಾಗಿ ಪಂಚಾಯಿತಿ ಅನುಮತಿ ಪಡೆದು ಧ್ವಜಸ್ತಂಭ ನಿರ್ಮಾಣ ಮಾಡಿ, ಹನುಮ ಧ್ವಜ ಹಾರಿಸಲಾಗಿತ್ತು. ಕಳೆದ 40 ವರ್ಷದಿಂದ ಅಲ್ಲಿ ಹನುಮ ಧ್ವಜ ಹಾರಾಡುತ್ತಿತ್ತು. ಇಲ್ಲಿಯ ವರೆಗೆ ಯಾರು ಪ್ರಶ್ನೆ ಮಾಡಿರಲಿಲ್ಲ. ಆದರೆ ಈಗ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಥಳೀಯ ಶಾಸಕ ರವಿ ಗಾಣಿಗ ಒತ್ತಡ ಹೇರಿ ಧ್ವಜಸ್ತಂಭ ತೆರವುಗೊಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ

ದರ್ಶನ್ ಬಗ್ಗೆ one word ಅಂದಾಗ, ಸುದೀಪ್ ಹೇಳಿದ್ದೇನು..?

About The Author