Hassan News: ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ, ಕಿರಣ್ ನಿವಾಸದ ಮೇಲೂ ದಾಳಿ ನಡೆದಿದೆ.
ಹಾಸನದ ವಿನಾಯಕ ನಗರದಲ್ಲಿರುವ ನಿವಾಸ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆದಿದೆ.
ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ




