Hubli News: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಜನಸಾಮಾನ್ಯರ ಏಳ್ಗೆಯನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿಯವರ ಗುರಿಯಂತೆ 2047 ರವರೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ವಿಪಕ್ಷಗಳು ಚುನಾವಣಾ ಬಜೆಟ್ ಆಗುತ್ತೆ ಅಂತಾ ಭಾವಿಸಿದ್ದೇವು. ಆದರೆ ಕೇಂದ್ರ ಸರ್ಕಾರ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ. ಹೀಗಾಗಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದರು.
‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’
2024ರ ಕೇಂದ್ರ ಬಜೆಟ್ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

