Hubli News: ಹುಬ್ಬಳ್ಳಿ: ವಿದ್ಯಾನಗರದಲ್ಲಿ ಗುರುವಾರ ರಾತ್ರಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ವಿದ್ಯಾನಗರ ಪೊಲೀಸರು ಕೇವಲ 12 ಗಂಟೆಯಲ್ಲಿ ಬೇಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿನ್ನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬನಶಂಕರ ಕಾಲೋನಿಯಲ್ಲಿನ ಶೋಭಾ ಎಂಬುವರ ಮನೆಗೆ ಕೊರಿಯರ್ ಕೊಡುವ ನೆಪದಲ್ಲಿ ಬಂದಿದ್ದ ಯುವಕನೊಬ್ಬ ಏಕಾಏಕಿ ಶೋಭಾ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ.
ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಪರಾಧ ವಿಭಾಗದ ಡಿಸಿಪಿ ರವೀಶ ಮಾರ್ಗದರ್ಶನದಲ್ಲಿ ವಿದ್ಯಾನಗರ ಠಾಣೆಯ ಇನ್ಸ್ಪೆಕ್ಟರ್ ಗೌಳಿ ನೇತೃತ್ವದ ತಂಡ ಮಾಲತೇಶ್ ಎಂಬ ಆರೋಪಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ
ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ



