ಕ್ಷುಲ್ಲಕ ಕಾರಣಕ್ಕೆ ತರಕಾರಿ ಮಾರಾಟ ಮಾಡುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ

Dharwad News: ಧಾರವಾಡ: ತರಕಾರಿ ಮಾರಾಟ ಮಾಡಲು ಬಂದ ರೈತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡದ ಹೊಸ ಎಪಿಎಂಸಿಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಲೋಕೂರ ಗ್ರಾಮದ ರೈತ ಈರಪ್ಪ ರುದ್ರಪ್ಪ ಉಡಿಕೇರಿ ಹಲ್ಲೆಗೊಳಗಾದ ರೈತನಾಗಿದ್ದು, ಐದು ಜನ‌ ಹೊಲಸೇಲ್ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಪ್ರತಿನಿತ್ಯ ಈ ರೈತ ಎಪಿಎಂಸಿಗೆ ಬಂದು ತರಕಾರಿ ಮಾರಾಟ ಮಾಡುತ್ತಿದ್ದ. ಆದರೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ನಿನ್ನನ್ನು ಸುಮ್ಮನೆ ಬಿಡುವುದಿಲ್ಲವೆಂದು ಹೇಳಿ, ಐವರು ಹಲ್ಲೆ ನಡೆಸಿದ್ದಾರೆ.

ಸದ್ಯ ರೈತ ಈರಪ್ಪ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಟಿ ಪೂನಂ ಪಾಂಡೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

About The Author