Political News: ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಜೆಡಿಎಸ್, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ ಹೆಮ್ಮೆಯಿಂದ ಮಾತನಾಡಬೇಕು. ಶಾಸಕರು ಸದನದಲ್ಲಿ ಪರಿಣಾಮಕಾರಿಯಾಗಿ, ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸದನದ ಸಮಯವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಸಿಎಂ ಹೇಳಿದರು.
ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಏಕೆಂದರೆ ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿ ವಿಚಾರಗಳೇ ಇಲ್ಲ. ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ.
ಈ ಸತ್ಯ ನಾಡಿನ ಜನತೆಗೆ ಮನವರಿಕೆಯಾಗಿದೆ. ಆದರೆ ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಇದಕ್ಕೆ ನಮ್ಮ ಪಕ್ಷದ ಶಾಸಕರು ಸತ್ಯದ ಮೂಲಕ, ಅಧಿಕೃತ ಅಂಕಿ ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಬೇಕು.
ಬಿಜೆಪಿ – ಜೆಡಿಎಸ್ ನವರು ಗ್ಯಾರಂಟಿ ಯೋಜನೆಗಳ 5 ಕೋಟಿ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ನಾವು ಈ ಜನರ ಪರವಾಗಿ ನಿಂತಿದ್ದೇವೆ. ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಸಭೆಗೆ ರಾಜ್ಯದಿಂದ ಅಭ್ಯರ್ಥಿಗಳಾಗಿರುವ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಅಜಯ್ ಮಾಕನ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದೆ.
ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ… pic.twitter.com/EhvDbBuOCi
— Siddaramaiah (@siddaramaiah) February 14, 2024