Political News: ಸ್ವಾತಂತ್ರ್ಯ ಬಂದು 60 ವರ್ಷಗಳ ಕಾಲ ನಿರಂತರವಾಗಿ ಆಡಳಿತ ನಡೆಸಿದವರು ಕಾಂಗ್ರೆಸ್ ಪಕ್ಷದವರು. ಆದರೆ ಈ ನಾಡಿನಲ್ಲಿರುವ, ದೇಶದಲ್ಲಿರುವ ಬಡವರು ಬಡವರಾಗಿಯೇ ಉಳಿದಿರಲು ಕಾರಣಕರ್ತರೇ ಕಾಂಗ್ರೆಸ್ಸಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕನಿಷ್ಠ 20 ವರ್ಷಗಳ ಹಿಂದೆ ನಮ್ಮ ರಾಜ್ಯ ಹೋಗಿದೆ. ಏಕೆಂದರೆ, ರಾಜ್ಯದಲ್ಲಿ ಕಾಂಗ್ರೆಸ್ ಕಡೆಯಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ, ಯಾವುದೇ ಹೊಸ ಯೋಜನೆಗಳು ಘೋಷಣೆಯಾಗಿಲ್ಲವೆಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದರೆ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಅವರ ಆಡಳಿತ ಬಂದ ಬಳಿಕ, ಮತ್ತೆ ವಿಜಯನಗರ ಸಾಮ್ರಾಜ್ಯದ ಕಾಲ ಸ್ಥಾಪನೆಯಾಗಿಬಿಟ್ಟಿದೆ ಅನ್ನೋ ಭಾವನೆಯನ್ನು ಬಿಂಬಿಸುತ್ತಿದ್ದಾರೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಹಾಲು, ಮೊಸರು, ವಿದ್ಯುತ್ ಸೇರಿ ಹಲವು ದರಗಳನ್ನು ಏರಿಸಿದ್ದೀರಿ. ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿ, ಪುರುಷರಿಂದ ಹೆಚ್ಚು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕರ್ನಾಟಕ ರಾಜ್ಯವು ಕನಿಷ್ಟ 20 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಹೊಸ ಸರ್ಕಾರ ಬಂದ ಬಳಿಕ ಯಾವುದೇ ಹೊಸ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು #CongressFailsKarnataka pic.twitter.com/spdJOK9EuX
— BJP Karnataka (@BJP4Karnataka) February 14, 2024