Political News: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ.ಸತ್ಯನಾರಾಯಣ ತಂಡದವರು ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಜ್ವರ ಮತ್ತು ಗಂಟಲು ನೋವು ಇದ್ದ ಕಾರಣ ದೇವೇಗೌಡರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದರ ಜೊತೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದ್ದು. ಆದರೆ ಇದೀಗ ದೇವೇಗೌಡರು ಸುಧಾರಿಸಿಕೊಳ್ಳುತ್ತಿದ್ದು, ಬೇಗ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುತ್ತಾರೆ ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು, ನನ್ನ ಆರೋಗ್ಯದ ಬಗ್ಗೆ ನಿಮಗೆ ಸಿಗುತ್ತಿರುವ ವರದಿ ಬಗ್ಗೆ ಆತಂಕ ಬೇಡ. ನಾನು ತಪಾಸಣೆಗಾಗಿ ಮಾತ್ರ ಆಸ್ಪತ್ರೆ ಸೇರಿದ್ದೇನೆ. ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ಮರಳಿ ಮನೆಗೆ ತೆರಳುತ್ತೇನೆ ಎಂದು ಹೇಳಿದ್ದಾರೆ.
ಬಡವರು ಬಡವರಾಗಿ ಉಳಿಯುವುದಕ್ಕೆ ಕಾರಣಕರ್ತರೇ ಕಾಂಗ್ರೆಸ್‌ನವರು: ಬಿ.ವೈ.ವಿಜಯೇಂದ್ರ
ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ: ಸಿಎಂ ಸಿದ್ದರಾಮಯ್ಯ




