Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ.
ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ ಯಾವುದೇ ಬಸ್‌ಗಳಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳಲಿಲ್ಲ.
ಇಂದು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್‌ನಲ್ಸ್ ಪರೀಕ್ಷೆ ಇತ್ತು. ಆದರೆ ಬಸ್ ಇಲ್ಲದೇ, ಪರೀಕ್ಷೆಗೆ ಹಾಜರಾಗಲು ಪರದಾಡಬೇಕಾಗಿದ್ದು, ಈ ಕಾರಣಕ್ಕೆ ಎಲ್ಲಾ ಮಾರ್ಗದ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿದು ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಶಾಸಕ ಎಚ್.ಕೆ.ಸುರೇಶ್ ಕರೆ ಮಾಡಿದ್ದಾರೆ. ಆದರೂ ಕೂಡ ಭಂಡತನ ತೋರಿರುವ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬರಲಿಲ್ಲ.
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರಹಾಕಿದ ಬಾಲಿವುಡ್ ಸೆಲೆಬ್ರಿಟಿಗಳು..
ತ್ರಿಷಾ ವಿರುದ್ಧ 25 ಲಕ್ಷ ಪಡೆದ ಆರೋಪ ಹಾಕಿದ್ದ ಮುಖಂಡನ ವಿರುದ್ಧ ಕಾನೂನು ಸಮರ..




