Thursday, November 7, 2024

Latest Posts

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

- Advertisement -

Belagavi Political News: ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಕಣಕ್ಕೆ ಇಳಿಸಲು ಕಾಂಗ್ರೆಸ್ (Congress) ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ಎಂದರು.

ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ ಮಾಡುತ್ತದೆ ಎಂದು ಹೇಳಿದರು.

ಖಂಡಿತವಾಗಿಯೂ ಅಭ್ಯರ್ಥಿಗಳ ನಾಮನಿರ್ದೇಶನವು ಜಾತಿ ಲೆಕ್ಕಾಚಾರಗಳನ್ನು ಆಧರಿಸಿರುತ್ತದೆ. ಆದರೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸಮುದಾಯದಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಜನಪ್ರಿಯರಾಗಬೇಕು ಎಂದರು.

ಸತೀಶ್ಗೆ ಟಿಕೆಟ್ ಕೊಡುವುದು ಬಹುತೇಕ ಪಕ್ಕಾ ಆಗಿತ್ತು

ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ‌ ಸ್ಪರ್ಧೆಯಿಂದ ಬಿಜೆಪಿ ಭದ್ರ ಕೋಟೆ ಛಿದ್ರ ಮಾಡಬಹುದು ಎನ್ನುವ ಲೆಕ್ಕಾಚಾರ ಕಾಂಗ್ರೆಸ್ ಹೈಕಮಾಂಡ್ದಾಗಿತ್ತು. ಕಳೆದ ಬಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಐದು ಸಾವಿರ ಮತಗಳ ಅಂತರದಿಂದ ಸತೀಶ್ ಸೋತಿದ್ದರು. ಈ ಬಾರಿ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲುಲು ಸತೀಶ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ ಸತೀಶ್ ಜಾರಕಿಹೊಳಿ ಸ್ಪರ್ಧೆ ಮಾಡುವುದಿಲ್ಲವೆಂದು ಎಲ್ಲದಕ್ಕೂ ಫುಲ್ಸ್ಟಾಪ್ ಇಟ್ಟಿದ್ದಾರೆ.

ಸುರೇಶ್ ಅಂಗಡಿ ಫ್ಯಾಮಿಲಿ vs ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಅಂಗಡಿ ಕುಟುಂಬದಿಂದ ಮಂಗಲಾ ಅಂಗಡಿ ಅಥವಾ ಇವರ ಪುತ್ರಿಗೆ ಬಿಜೆಪಿ ಟಿಕೆಟ್ ಕೊಟ್ಟರೆ ಇತ್ತ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್ ನೀಡುವ ಸಾಧ್ಯತೆ ಇತ್ತು. ಪ್ರಿಯಾಂಕಾ ಅವರಿಗೆ ಟಿಕೆಟ್ ಕೊಟ್ಟರೆ ಸತೀಶ್ ಜಾರಕಿಹೊಳಿ‌ ವರ್ಚಸ್ಸಿನ ಮೇಲೆ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರವಿತ್ತು. ಇನ್ನೊಂದೆಡೆ, ಪ್ರಿಯಾಂಕಾ ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಜಾರಕಿಹೊಳಿ‌ ಸಹೋದರರು ಬೆಂಬಲಿಸಿ ಗೆಲ್ಲಿಸುತ್ತಾರೆ ಎನ್ನುವ ಲೆಕ್ಕಾಚಾರವೂ ಇತ್ತು. ಆದರೆ ಇದೀಗ ಎಲ್ಲ ಲೆಕ್ಕಾಚಾರ ತಲೆಕೆಳಗಾಗಿದೆ.

ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ

ಈ ದೇವರನ್ನು ನಂಬಿದ್ದಕ್ಕೆ ನನ್ನ ಪತಿ ಚುನಾವಣೆಯಲ್ಲಿ ಗೆದ್ದಿದ್ದರು: ಭವಾನಿ ರೇವಣ್ಣ

ನಾನು ಕಾಣಿಸಿಕೊಳ್ಳದ್ದಕ್ಕೆ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡಿದರು: ಭವಾನಿ ರೇವಣ್ಣ

- Advertisement -

Latest Posts

Don't Miss