ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ..

Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ಅಸಮಾಧಾನ ಹೊರಹಾಕಿದ್ದರು. ಪಕ್ಷದಲ್ಲಿ ಆಂತರಿಕ ರಾಜಕೀಯ ಶುರುವಾಗಿದೆ. ಇದೇ ಕಾಂಗ್ರೆಸ್‌ ಪಕ್ಷದ ಪ್ರಮುಖ ದೌರ್ಬಲ್ಯವಾಗಿದೆ. ಒಬ್ಬೊಬ್ಬರು ಒಂದೊಂದು ಗುಂಪು ಕಟ್ಟಿಕೊಂಡು, ರಾಜಕೀಯ ಮಾಡುತ್ತಿದ್ದಾರೆ. ಚುನಾವಣೆಗೆ ನಿಲ್ಲುತ್ತಿದ್ದಾರೆಂದು ವಿಜಯಧರಣಿ ಆರೋಪಿಸಿದ್ದರು.

ಇನ್ನು ಬಿಜೆಪಿ ಸೇರಿದ ಬಳಿಕ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್ ಭಾಗವಾಗಿದ್ದೆ. ಆದರೆ ಆಂತರಿಕ ರಾಜಕಾರಣದಿಂದ ಬಿಜೆಪಿ ಸೇರುವ ಹಾಗಾಗಿದೆ. ಪ್ರಧಾನಿ ಮೋದಿಯವರು ದೇಶದಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಂಡು ನಾನು ಬಿಜೆಪಿ ಸೇರಿದ್ದೇನೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಗೆಲ್ಲಿಸೋಣವೆಂದು ಕರೆ ನೀಡಿದ್ದಾರೆ.

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

ಬೈಕ್ ರೈಡ್ ಮೂಲಕ ಕಾಶ್ಮೀರಕ್ಕೆ ಸೊಲೋ ಟ್ರಿಪ್: ಹೊಸ ದಾಖಲೆ ಬರೆದ ಧಾರವಾಡ ಯುವತಿ

About The Author