Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು ತೊಂದರೆಯಾಗಿದೆ.
ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದು, ಪಟಾಕಿ ಸಿಡಿಸಿ ಕಾಡಾನೆಗಳನ್ನು ನಿಯಂತ್ರಿಸಿದ್ದಾರೆ. ಪರೇಡ್ ಮಾಡಿಕೊಂಡು ಆನೆಗಳು ಕಾಫಿ ತೋಟದೊಳಗೆ ನುಗ್ಗಿದ್ದು, ಕಾಡಾನೆ ಪರೇಡ್ ಮಾಡುವುದನ್ನು ಅಲ್ಲೇ ಇದ್ದ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಇನ್ನು ಇದು ಕಾಫಿ ಬೀಜ ಕುಯ್ಲು ಮಾಡುವ ಸಮಯ. ಇಂಥ ಸಮಯದಲ್ಲಿ ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿದ್ದು, ಕಾಫಿ ತೋಟಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಜನರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?
ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು
ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ




