Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ.
- ಆರ್ಟಿಕಲ್ 25 ರ ಮೂಲಕ ಮತಾಂತರವನ್ನು ಕಾನೂನುಬದ್ಧಗೊಳಿಸಲಾಯಿತು.
- ಆರ್ಟಿಕಲ್ 28 ರ ಮೂಲಕ ಹಿಂದೂಗಳ ಧಾರ್ಮಿಕ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡು, ಮುಸಲ್ಮಾನರಿಗೆ ಹಾಗೂ ಕ್ರೈಸ್ತರಿಗೆ ಆರ್ಟಿಕಲ್ 30 ರ ಮೂಲಕ ಧಾರ್ಮಿಕ ಶಿಕ್ಷಣದ ಹಕ್ಕನ್ನು ನೀಡಿತು.
- HRCE Act 1951 ಮೂಲಕ ನಮ್ಮ ದೇವಸ್ಥಾನದ ಹಣವನ್ನು ತೆಗೆದುಕೊಂಡರು.
- ಹಿಂದೂ ಕುಟುಂಬಗಳನ್ನು ವಿಭಜಿಸಲು, ಒಗ್ಗಟ್ಟನ್ನು ಮುರಿಯಲು ಡೈವೋರ್ಸ್ ಆಕ್ಟ್, ಡೌರಿ ಕಾಯ್ದೆ, ಹಿಂದೂ ಕೋಡ್ ಬಿಲ್ ಅನ್ನು ಪರಿಚಯಿಸಿದರು; ಆದರೆ, ಮುಸಲ್ಮಾನರ ಪರ್ಸನಲ್ ಲಾ ಬೋರ್ಡ್ ಅನ್ನು ಮುಟ್ಟುವ ಧೈರ್ಯಕ್ಕೆ ಹೋಗಲಿಲ್ಲ, ಬಹುಪತ್ನಿತ್ವ ಕಾನೂನುಬದ್ಧ ಆಗಿರುವುದರಿಂದ ಮುಸಲ್ಮಾನರ ಜನಸಂಖ್ಯೆ ಹೆಚ್ಚಾಯಿತು.
- ಸ್ಪೆಷಲ್ ಮ್ಯಾರೇಜ್ ಆಕ್ಟ್ ಅನ್ನು 1951 ರಲ್ಲಿ ಪರಿಚಯಿಸುವ ಮೂಲಕ ಮುಸಲ್ಮಾನ ಗಂಡು ಮಕ್ಕಳು, ಹಿಂದೂ ಯುವತಿಯರನ್ನು ವಿವಾಹ ಮಾಡಿಕೊಳ್ಳುವ ಅವಕಾಶ ನೀಡಿತು.
- 1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಪರಿಚಯಿಸಿ ಮಾಧ್ಯಮಗಳ ಹಕ್ಕನ್ನು ಕಿತ್ತೆಸೆಯಲಾಯಿತು, ಸಾವಿರಾರು ಜನರನ್ನು ಜೈಲಿಗಟ್ಟಿದರು. ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಸಾವಿರಾರು ಜನ ಅಮಾಯಕರನ್ನು ಜೈಲಿಗೆ ದಬ್ಬಿದ್ದು ಇದೆ ಕಾಂಗ್ರೆಸ್ ಪಕ್ಷ.
- ಪ್ಲೇಸಸ್ ಆಫ್ ವರ್ಶಿಪ್ ಆಕ್ಟ್ ಮೂಲಕ ಹಿಂದೂಗಳ 40000 ದೇವಸ್ಥಾನಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಯಿತು.
- ವಕ್ಗ್ ಆಕ್ಟ್ ಮೂಲಕ ಯಾವುದೇ ಭೂಮಿಯನ್ನು ಮುಸಲ್ಮಾನರು ತೆಗೆದುಕೊಳ್ಳುವ ಹಕ್ಕನ್ನು ಪಡೆದರು.
- 2009 ರಲ್ಲಿ ಕೇಸರಿ ಭಯೋತ್ಪಾದನೆ (Saffron Terrorism) ಎಂಬ ಪದಪುಂಜವನ್ನು ಪರಿಚಯಿಸಿದರು.
ಈ ರೀತಿ ಟ್ವೀಟ್ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ?
🔶ಆರ್ಟಿಕಲ್ 25 ರ ಮೂಲಕ ಮತಾಂತರವನ್ನು ಕಾನೂನುಬದ್ಧಗೊಳಿಸಲಾಯಿತು
🔶ಆರ್ಟಿಕಲ್ 28 ರ ಮೂಲಕ ಹಿಂದೂಗಳ ಧಾರ್ಮಿಕ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡು, ಮುಸಲ್ಮಾನರಿಗೆ ಹಾಗೂ ಕ್ರೈಸ್ತರಿಗೆ ಆರ್ಟಿಕಲ್ 30 ರ ಮೂಲಕ ಧಾರ್ಮಿಕ ಶಿಕ್ಷಣದ ಹಕ್ಕನ್ನು ನೀಡಿತು
🔶HRCE Act 1951 ಮೂಲಕ ನಮ್ಮ ದೇವಸ್ಥಾನದ…
— Basanagouda R Patil (Yatnal) (@BasanagoudaBJP) March 1, 2024
ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?
ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು
ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ




