ಗೊಂದಲದ ಗೂಡಾದ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ

Hassan News: ಹಾಸನ : ಹಾಸನದಲ್ಲಿ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ ಗೊಂದಲದ ಗೂಡಾಗಿದ್ದು,  ನೋಂದಣಿ ಕೇಂದ್ರದ ಮುಂದೆ ಸಾವಿರಾರು ಜನ ರೈತರು ಜಮಾಯಿಸಿದ್ದರು.

ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ನೋಂದಣಿ ಕೇಂದ್ರದ ಮುಂದೆ ಸಾವಿರಾರು ರೈತರು ಜಮಾಯಿಸಿದ್ದರು.

ಒಮ್ಮೆಲೆ ರೈತರ ಜಮಾವಣೆಯಿಂದ ಸ್ಥಳದಲ್ಲಿ ಗೊಂದಲ ಉಂಟಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ವ್ಯವಸಾಯ ಸೇವಾ ಮಾರಾಟ ಕೇಂದ್ರದಲ್ಲಿ ರೈತರ ನೂಕುನುಗ್ಗಲು ಉಂಟಾಗಿದ್ದು, ಅಧಿಕಾರಿಗಳು ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಮಾಡದಿರುವುದೇ ಈ ಗೊಂದಲಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ನೋಂದಣಿ ಬರುವ ರೈತರಿಗೆ, ಅಧಿಕಾರಿಗಳು ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ನಿನ್ನೆಯಿಂದ ಸರತಿ ಸಾಲಿನಲ್ಲಿ ಕಲ್ಲುಗಳನ್ನು ಇಟ್ಟು, ರೈತರು ಅಲ್ಲೇ ನಿದ್ದೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

About The Author