ಈ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರವಾಗಲಿ ಗುತ್ತಿಗೆದಾರರಿಗೆ ಕ್ಲಿಯರೆನ್ಸ್ ಪತ್ರ ನೀಡಲು ನಯಾಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ. .

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರದ ಅಸಹಕಾರದ ಹೊರತಾಗಿಯೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

About The Author