Monday, April 21, 2025

Latest Posts

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

- Advertisement -

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

https://www.youtube.com/watch?v=Yjc7GC_y-2w

ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು ಭತ್ತ ಖರೀದಿ ಕೇಂದ್ರ ಜಿಲ್ಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ ಇರುವುದು ರೈತರಿಗೆ ಆರ್ಥಿಕವಾಗಿ ಅನಾನುಕೂಲವಾಗಿದೆ ಇದರಿಂದ ರೈತರ ಬೆಳೆ ದಳ್ಳಾಳಿಗಳ  ಪಾಲಾಗಿ ರೈತರಿಗೆ ನ್ಯಾಯವಾದ ಬೆಲೆ ಸಿಗುತ್ತಿಲ್ಲ ಆದ್ದರಿಂದ ಕೂಡಲೇ ಎಲ್ಲ ಭಾಗಗಳಲ್ಲೂ ಭತ್ತ ಖರೀದಿ ಕೇಂದ್ರ ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ರು.

ಕೃಷ್ಣರಾಜಸಾಗರ ಅಣೆಕಟ್ಟಿನಲ್ಲಿ 90 ಅಡಿ ನೀರು ಇರುವುದರಿಂದ ನಾಲೆಗೆ ನೀರು ಹರಿಸಿ ರೈತರು ಬೆಳೆದಿರುವ ಬೆಳೆಗಳನ್ನು ಸಂರಕ್ಷಿಸಲು ಅನುಕೂಲ ಮಾಡಿಕೊಡಬೇಕು ಹಾಗೂ ಮುಂದಿನ ಭತ್ತ ನಾಟಿ ಮಾಡಲು ನೀರಿನ ಅಗತ್ಯ ಇರುವುದರಿಂದ ಕೂಡಲೇ ನಾಲೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಕೆ.ಪಿ ನಾಗಣ್ಣ, ಎಚ್ ತಮ್ಮೇಗೌಡ, ವಿಜಯ್ ಕುಮಾರ್, ಚಂದ್ರಶೇಖರ್ ಮತ್ತಿತರರು ಭಾಗಿಯಾಗಿದ್ದರು.

ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ

- Advertisement -

Latest Posts

Don't Miss