Hubli News: ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕ್ಷೇತ್ರದಲ್ಲಿ ಬೆಳ್ಳಂ ಬೆಳಗ್ಗೆ ಟೆಂಪಲ್ ರನ್ ಆರಂಭಿಸಿದ್ದಾರೆ.
ಕಳೆದ ದಿನ ಟಿಕೆಟ್ ಘೋಷಣೆಯ ಬಳಿಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಮುಂಜಾನೆ ನೇರವಾಗಿ ಉತ್ತರ ಕರ್ನಾಟಕ ಪ್ರತಿಷ್ಠಿತ ಮಠ ಎಂದು ಕರೆಯಿಸಿಕೊಳ್ಳುವ ಸದ್ಗುರು ಶ್ರೀ ಸಿದ್ದಾರೂಢರ ಮಠಕ್ಕೆ ಭೇಟಿ ನೀಡಿ, ಶ್ರೀ ಸಿದ್ದಾರೂಢ ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಆರ್ಶೀವಾದ ಪಡೆದುಕೊಂಡರು.
ಬಳಿಕ ಗೋಕುಲ್ ರೋಡ್‌ನ ಆರ್ ಎಸ್ ಎಸ್ ಕಚೇರಿಯ ಕೇಶವ ಕುಂಜಕ್ಕೆ ಭೇಟಿ ನೀಡಿ, ಆರ್ ಎಸ್ ಎಸ್ ಹಿರಿಯರ ಆರ್ಶೀವಾದ ಪಡೆದುಕೊಂಡರು. ನಂತರ ಧಾರವಾಡಗೆ ಭೇಟಿ ನೀಡಲಿರೋ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಮುರುಘಾಮಠಕ್ಕೆ ಭೇಟಿ ನೀಡಿ, ಶ್ರೀ ಮಲಿಕಾರ್ಜುನ ಸ್ವಾಮಿಜಿಗಳ ಆರ್ಶೀವಾದ ಪಡೆಯಲಿದ್ದಾರೆ.
3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ