Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದಾರೆ. ಅಲ್ಲದೇ, ಜೆಡಿಎಸ್ ಹೆಸರಿನಿಂದ ಸೆಕ್ಯುಲರ್ ಪದ ಕಿತ್ತಾಕಿ ಎಂದು ಜೆಡಿಎಸ್‌ಗೆ ಟಾಂಗ್ ಕೊಟ್ಟರೆ, ವೇದಿಕೆಗೆ ಬನ್ನಿ ಎಲ್ಲ ವಿಷಯಗಳ ಬಗ್ಗೆ ಚರ್ಚಿಸೋಣವೆಂದು ಬಿಜೆಪಿಗೆ ಸವಾಲ್ ಹಾಕಿದ್ದಾರೆ.
ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿ ಪ್ಲೇಟ್ ಚೇಂಜ್ ಮಾಡಿದ್ದಾರೆ. ಮಾನ್ಯ ದೇವೇಗೌಡರೇ.. ಜೆಡಿಎಸ್ ಹೆಸರಿನಲ್ಲಿರುವ ಸೆಕ್ಯುಲರ್ ಕಿತ್ತಾಕಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಕರ್ನಾಟಕ ಆರ್ಥಿಕ ದಿವಾಳಿ ಆಗುತ್ತದೆಂದು ಪ್ರಧಾನಿ ಮೋದಿ ಹೇಳಿದ್ದರೂ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇದಕ್ಕಾಗಿ 36 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ 52,090 ಕೋಟಿ ರೂ. ಮೀಸಲಿಟ್ಟಿದ್ದೇವೆ. ಬಿಜೆಪಿ, ಜೆಡಿಎಸ್‌ನವರು ದುಡ್ಡಿಲ್ಲ ಎನ್ನುತ್ತಿದ್ದರೂ ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ. ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ, ಯಡಿಯೂರಪ್ಪಅವರೇ ಬನ್ನಿ, ಒಂದೇ ವೇದಿಕೆ ಮೇಲೆ ಈ ಬಗ್ಗೆ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ



