Political News: ತನಗೆ ಲೋಕಸಭೆ ಚುನಾವಣೆಗೆ ಟಿಕೇಟ್ ಕೈ ತಪ್ಪಿದ್ದರೂ ಕೂಡ, ಪ್ರತಾಪ್ ಸಿಂಹ ತಮ್ಮ ನಡತೆ, ಮಾತುಗಳಿಂದಲೇ, ಅಭಿಮಾನಿಗಳ ಮನಸ್ಸು ಗೆಲ್ಲುತ್ತಿದ್ದಾರೆ. ಎಷ್ಟೋ ಜನ, ಬಿಜೆಪಿ ಹೈಕಮಾಂಡ್ ಇಂಥ ಕಾರ್ಯಕರ್ತನಿಗೆ ಟಿಕೇಟ್ ನೀಡದೇ, ಎಷ್ಟು ದೊಡ್ಡ ತಪ್ಪು ಮಾಡಿದೆವು ಎಂದು ಪಶ್ಚಾತಾಪ ಪಡಲಿದ್ದಾರೆಂದು ಹೇಳಿದ್ದಾರೆ.
ಏಕೆಂದರೆ, ಪ್ರತಾಪ್ ಸಿಂಹ, ಮಾಡಿದ ಟ್ವೀಟ್ ಹಾಗಿದೆ. ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
ಯದುವೀರ್ ಒಡೆಯರ್ಗೆ ಟಿಕೇಟ್ ಸಿಕ್ಕಿದ್ದಕ್ಕೆ, Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿ ಶುಭಕೋರಿದ್ದರು. ಅಲ್ಲದೇ, ಯದುವೀರ್ಗೆ ಕರೆ ಮಾಡಿ, ಶುಭಾಶಯವನ್ನೂ ಕೂಡ ಕೋರಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದರು.
ಇನ್ನು ಬಿಜೆಪಿ ಪಟ್ಟಿ ರಿಲೀಸ್ ಮಾಡುವ ಮುನ್ನವೇ ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ ವ್ಯಕ್ತಿಯ ಮಗ, ನಾನು ಸಾಯುವವರೆಗೂ ಮೋದಿ ಭಕ್ತ ಎಂದು ಪ್ರತಾಪ್ ಹೇಳಿದ್ದಾರೆ. ಅಲ್ಲದೇ, ನನ್ನನ್ನು ಏನೇ ಮಾಡ್ತೀರಿ ಅಂದ್ರು ಕೂಡ ನಾನು ಹೊರಗಡೆ ಹೋಗುವುದಿಲ್ಲ. ನಾನು ಈ ಪಕ್ಷದ ಕಟ್ಟಾಳು ಎಂದಿದ್ದರು.
ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ.
— Pratap Simha (Modi Ka Parivar) (@mepratap) March 14, 2024
3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.
ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ