ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ: ಶೆಟ್ಟರ್

Hubli News: ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ನನ್ನ ಹೆಸರು ಬೆಳಗಾವಿಗೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್ ಘೋಷಣೆ ಬಳಿಕ ಬೆಳಗಾವಿಗೆ ತೆರಳಿ ಚುನಾವಣೆ ಪ್ರಚಾರ ನಡೆಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆವರು, ಬೆಳಗಾವಿಯ ಬಿಜೆಪಿ ಹಿರಿಯ ನಾಯಕರಾದ ಪ್ರಭಾಕರ ಕೋರೆ, ಈರಣ್ಣಾ ಕಡಾಡಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಚರ್ಚೆ ಮಾಡಿದ್ದೇನೆ. ಎಲ್ಲರು ಸೇರಿಕೊಂಡು ಚುನಾವಣೆ ಎದುರಿಸೋಣ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಕೆಲವರು ತಮ್ಮ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿರುತ್ತಾರೆ. ಇದಕ್ಕೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ, ನನಗೆ ಟಿಕೆಟ್ ತಪ್ಪಿಸುವ ಸಲುವಾಗಿಯೇ ಹೋಗಿದ್ದಾರೆ ಎಂಬುದು ಸುಳ್ಳು, ಆ ಕುತಂತ್ರ ನಡೆದಿಲ್ಲ. ಮೋದಿ ಮತ್ತು ಅಮಿತ್ ಶಾ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು, ಬೇರೆ ಬೇರೆ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿರುವ ಕಾರಣಕ್ಕೆ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ಇದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

ಶಾಲೆಯಿಂದ ಬರುತ್ತಿದ ಬಾಲಕಿ ಮೇಲೆ ರಸ್ತೆಯಲ್ಲೇ ಲೈಂ*ಗಿಕ ಕಿರುಕುಳ: ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

ಸ್ಟ್ರಾಬೇರಿ ತಿಂದು 8 ವರ್ಷದ ಬಾಲಕ ಸಾವು..

About The Author