Political News: ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ. ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮುನ್ನಡೆಸುವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಹೇಳಿರುವುದು ಸರಿಯಾಗಿದೆ. ಆ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ @narendramodi ನೇತೃತ್ವದ ಕೇಂದ್ರ @BJP4India ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ…
— Siddaramaiah (@siddaramaiah) March 21, 2024
ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ @BJP4India ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.
ಪ್ರಧಾನಿ @narendramodi ಮತ್ತು ಬಿಜೆಪಿಯಲ್ಲಿ…
— Siddaramaiah (@siddaramaiah) March 21, 2024
“ಪ್ರಧಾನಿ @narendramodi ಅವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮುನ್ನಡೆಸುವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ @RahulGandhi ಅವರು ಹೇಳಿರುವುದು ಸರಿಯಾಗಿದೆ. ಆ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು…
— Siddaramaiah (@siddaramaiah) March 21, 2024
ಕಾಂಗ್ರೆಸ್ ಸರ್ಕಾರ ಹಾಸನದ ರೈತರಿಗೂ ದ್ರೋಹ ಬಗೆದಿದೆ: ಮಾಜಿ ಶಾಸಕ ಪ್ರೀತಂಗೌಡ
ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಭೇಟಿಯಾದ ಮಾಜಿ ಸಚಿವ ರೇವಣ್ಣ, ಪ್ರಜ್ವಲ್




