ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ: ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ ಪುತ್ರ

Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು.

ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದಿದ್ದಾರೆ.

ರಾಮನಗರ MLA ಇಕ್ಬಾಲ್ ಹುಸೇನ್ ಮತ್ತು ಸಂಸದ DK ಸುರೇಶ್ ವಿರುದ್ದ ಸಿಡಿದೆದ್ದ ರಾಮನಗರದ ದಲಿತ ಮುಖಂಡರು.

ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

ನಟ ರಣ್ವೀರ್ ಸಿಂಗ್ ವಿರುದ್ಧ ಕಿಡಿಕಾರಿದ ಶಕ್ತಿಮಾನ್ ಪಾತ್ರಧಾರಿ ಮುಖೇಶ್ ಖನ್ನಾ..

About The Author