Political News: ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ವಾಕ್ಪ್ರಹಾರ ನಡೆಸಿದ್ದಾರೆ.
ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿಮಸರ್ಕಾರ ಫ್ರೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ. ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಫ್ರೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ. ಎದುರಾಳಿ ಪಕ್ಷವೊಂದು ಚುನಾವಣೆ ನಡೆಸದಂತೆ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು @BJP4India ಸರ್ಕಾರ ಫ್ರೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ.
ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ… pic.twitter.com/WRu2BA6rsE
— Siddaramaiah (@siddaramaiah) March 22, 2024
ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಫ್ರೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ.
ಎದುರಾಳಿ ಪಕ್ಷವೊಂದು ಚುನಾವಣೆ ನಡೆಸದಂತೆ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ…— Siddaramaiah (@siddaramaiah) March 22, 2024
ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ
ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ




