Political News: ಬಿ.ವೈ.ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ, ಸುಮಲತಾ ಅವರ ಬಳಿ ಮಾತನಾಡಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಸಾಕಷ್ಟು ಬಾರಿ ಚುನಾವಣೆ ಸಮಯದಲ್ಲಿ ನಾನು ಒಂದು ವಿಚಾರವನ್ನು ಹೇಳಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಮತ್ತು ಜೆಡಿಎಸ್, ಎರಡೂ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಬೇಕಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ ಕೂಡ ನಾವು ಗೆಲ್ಲಬೇಕು ಎಂಬ ಉದ್ದೇಶವಿದೆ. ಮಂಡ್ಯ ಜಿಲ್ಲೆಯಲ್ಲಿ ನಮ್ಮ ನಾರಾಯಣಗೌಡರು, ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದು, ಸಚಿವರಾಗಿ ಕೆಲಸ ಮಾಡಿದ್ದಾರೆ. ಹೀಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲ ಮುಖಂಡರು ನಮ್ಮ ಜೊತೆಯಲ್ಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
ನಾವೆಲ್ಲ ಸೇರಿ ಸಭೆ ಮಾಡಿದ್ದೇವೆ. ಇನ್ನು ಸುಮಲತಾ ಅವರನ್ನು ನಾನು ಭೇಟಿಯಾಗಿ ಮಾತನಾಡುತ್ತೇನೆ. ಇಲ್ಲಿಯವರೆಗೂ ಅವರಿಗೆ ಪಕ್ಷ ಗೌರವ ನೀಡಿದೆ. ಇನ್ನು ಮುಂದೆಯೂ ಅವರನ್ನು ಬಿಜೆಪಿ ಪಕ್ಷ ಗೌರವದಿಂದ ನಡೆಸಿಕೊಳ್ಳಿದೆ. ಉತ್ತಮ ಸ್ಥಾನಮಾನ ನೀಡಲಿದೆ ಎಂದರು..
ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್
ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

