Hassan News: ಹಾಸನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್‌ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ ಪ್ರಜ್ವಲ್, ಮಾಜಿ ಪ್ರಧಾನಿ ದೇವೇಗೌಡರು, ತಂದೆ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರ ಆಶೀರ್ವಾದ ಪಡೆದಿದ್ದಾರೆ. ಬಳಿಕ ಶಾಸಕರುಗಳಾದ ಎ.ಮಂಜು, ಸಿ.ಎನ್.ಬಾಲಕೃಷ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ನಂತರ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ತಂದೆ ಮಾಜಿಸಚಿವ ಎಚ್.ಡಿ.ರೇವಣ್ಣ, ಶಾಸಕರೊಂದಿಗೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ.
ಈ ಬಾರಿ ನನ್ನ ಗೆಲುವು ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೋಟಿ
ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ
ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ




