ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ.

ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ ಪತ್ನಿ ಮತ್ತು ಮಾವನ ಜೊತೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಶೆಟ್ಟಿಹಳ್ಳಿ ಬೈಪಾಸ್ ಬಳಿ ಕಾರಿ ಟೈರ್ ಪಂಕ್ಚರ್ ಆಗಿದೆ.

ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಮಧು ಟಯರ್ ಚೇಂಜ್ ಮಾಡುತ್ತಿದ್ದರು. ಈ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಮಧು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದರೆ ಮಧು ಮಾವ ಜವರಯ್ಯ ತೀವ್ರವಾಗಿ ಗಾಯಗೊಂಡಿದ್ದು, ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಲಾರಿ ಚಾಲಕ ಲಾರಿ ನಿಲ್ಲಿಸದೇ ಎಸ್ಕೇಪ್ ಆಗಿದ್ದಾನೆ. KA-35, M-2916 ನಂಬರ್‌ನ ಕಾರು ಇದಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ ವ್ಯಕ್ತಿ ಸಾವು..

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಯಾವುದೇ ಗೊಂದಲಗಳಿಲ್ಲ. ಈ ಸಭೆಯ ಮೂಲಕ ಎಲ್ಲರಿಗೂ ಸ್ಟ್ರಾಂಗ್ ಮೆಸೇಜ್ ಹೋಗಿದೆ: ಪ್ರಜ್ವಲ್ ರೇವಣ್ಣ

About The Author