H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹೆಚ್‌.ಡಿ ಕುಮಾರಸ್ವಾಮಿ ಅವರು ಇಂದು ಮೂರು ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್‌, ಯದುವೀರ್, ಸಿ.ಎಸ್ ಪುಟ್ಟರಾಜು ಜೊತೆ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಸುರೇಶ್‌ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಜೊತೆ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಮೂರನೇ ಬಾರಿ ನಿಖಿಲ್ ಕುಮಾರಸ್ವಾಮಿ, ಶಾಸಕ‌ ಹೆಚ್.ಟಿ ಮಂಜು, ಮಾಜಿ ಸಚಿವ ಸಾ.ರಾ ಮಹೇಶ್, ಜೆಡಿಎಸ್ ಮುಖಂಡ ರಾಮಚಂದ್ರು ಜೊತೆ ನಾಮಿನೇಶನ್ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Congress : ಲೋಕಸಮರಕ್ಕೆ ಕಾಂಗ್ರೆಸ್ ನ 25 ಗ್ಯಾರಂಟಿಗಳು…!

About The Author