ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಮಾತನಾಡುವ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಮೋದಿ ಮತ್ತು ಕಾಂಗ್ರೆಸ್ ದೇಶದಲ್ಲಿ ಮಾಡಿರುವ ಅಭಿವೃದ್ಧಿಯ ಬಗ್ಗೆ ಮಾತನಾಡೋಣ ಬನ್ನಿ ಎಂದು ಸವಾಲ್ ಹಾಕಿದ್ದಾರೆ. ಅವರ ಟ್ವೀಟ್ ಈ ರೀತಿ ಇದೆ..

ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ನನ್ನ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಲ್ಲಿ ಎಲ್ಲಾ ಧರ್ಮದವರೂ ಒಂದಾಗಿ ಬಾಳುತ್ತಿದ್ದೇವೆ. ಯತ್ನಾಳ್‌ರಂತೆ ಮನೆ ಒಡೆಯೋ ಕೆಲಸ, ಕೀಳು ಭಾಷೆ ಬಳಕೆಯನ್ನು ನಾವು ಮಾಡಲ್ಲ.

ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್‌ ಮಾತೆತ್ತಿದರೆ ಪಾಕಿಸ್ತಾನ ಪಾಕಿಸ್ತಾನ ಎನ್ನುತ್ತಾರೆ ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೇ ಅಲ್ಲಿಗೇ ಹೋಗಲಿ. ಬಿಜೆಪಿ ಭೀಷ್ಮ ಅಡ್ವಾಣಿಯವರ ಮೂಲವೇ ಪಾಕಿಸ್ತಾನ. ಆಮಂತ್ರಣವೇ ಇಲ್ಲದೇ ಪಕ್ಕದ ಮನೆಗೆ ಹೋಗುವಂತೆ ವೈರಿ ದೇಶಕ್ಕೆ ಹೋಗಿ ಬಂದವರು ನಿಮ್ಮ ವಿಶ್ವಗುರು ಮೋದಿ. ತಲೆಯಲ್ಲಿ ಮೆದುಳೇ ಇಲ್ಲದಂತೆ ಮಾಡನಾಡುವ, ಅರೆಹುಚ್ಚನಂತಾಗಿರುವ ಯತ್ನಾಳ್‌ರಿಂದ ಪಾಠ ಕಲಿಯುವ ಕರ್ಮ ನನಗಿನ್ನೂ ಬಂದಿಲ್ಲ.

ಚುನಾವಣೆ ವೇಳೆ ನಾಯಕರು ತಮ್ಮ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಬೇಕು. ಆದರೆ ಯತ್ನಾಳ್‌ ತಮ್ಮ ಪಕ್ಷದಿಂದ ನಡೆದಿರುವ ಯಾವುದೇ ಪ್ರಗತಿ ತೋರಿಸಲು ಸಾಧ್ಯವಾಗದೇ ಸೋಲುವ ಭಯದಿಂದ ಜನರ ಗಮನ ಬೇರೆಡೆ ಸೆಳೆಯಲು ಧರ್ಮಗಳನ್ನು ಎತ್ತಿಕಟ್ಟಿ, ಕೋಮುಭಾವನೆ ಕೆರಳಿಸೋ ಹೇಳಿಕೆಗಳನ್ನು ನೀಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಹೇಳಿಕೆ ಯತ್ನಾಳ್‌ ಅವರ ಮಾನಸಿಕ ಸ್ಥಿಮಿತತೆಯನ್ನು ತೋರಿಸುತ್ತಿದೆ. ದೇಶದ ಅಭಿವೃದ್ಧಿ, ದೇಶ ಪ್ರೇಮದ ವಿಚಾರಗಳು ಇಂತಹ ಹುಚ್ಚರಿಗೆ ಹೇಗೆ ತಿಳಿಯುತ್ತದೆ ಅಲ್ಲವೇ?

ಯತ್ನಾಳ್‌ ಅಂತಹವರ ಹೇಳಿಕೆಗಳಿಂದ ಬೇಸತ್ತು ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತೆ ಬಿಜೆಪಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸೋಲುವುದು ಖಚಿತ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ನಮ್ಮ ಕಾಂಗ್ರೆಸ್‌ ಸರ್ಕಾರದ ಜನಪ್ರಿಯತೆಯನ್ನು ಸಹಿಸಲಾರದೇ ಇಲ್ಲಸಲ್ಲದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಮೋದಿ ಅವಧಿಯಲ್ಲಿ ದೇಶದ ಮೇಲಿನ ಸಾಲ ದುಪ್ಪಟ್ಟಾಗಿದೆ, ಆಹಾರ ಪದಾರ್ಥಗಳು, ಪೆಟ್ರೋಲ್‌, ಎಲ್‌ಪಿಜಿ ಎಲ್ಲದರ ಬೆಲೆ ಗಗನಕ್ಕೇರಿದೆ, ಡಾಲರ್‌ ಎದುರು ನಮ್ಮ ರೂಪಾಯಿ ಮೌಲ್ಯ ಕುಸಿಯುತ್ತಿಲೇ ಇದೆ, ದೇಶದಲ್ಲಿ ನಿರುದ್ಯೋಗ, ಬಡತನ ತಾಂಡವವಾಡುತ್ತಿದೆ. ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣವನ್ನು ಮೋದಿ ಕೊಟ್ಟಿಲ್ಲ, ಬರಗಾಲದಿಂದ ಬೇಯುತ್ತಿರುವ ರಾಜ್ಯದ ರೈತರಿಗೆ ಬಿಡಿಗಾಸನ್ನೂ ಕೊಟ್ಟಿಲ್ಲ. ನಮ್ಮ ಜನಕ್ಕೆ ಅಕ್ಕಿ ಕೇಳಿದಾಗ ಕೊಡಲಿಲ್ಲ. ಮೋದಿ ವಿದೇಶಗಳ ಕಪ್ಪು ಹಣ ವಾಪಸ್‌ ತಂದು ದೇಶವಾಸಿಗಳ ಅಕೌಂಟ್‌ಗೆ 15 ಲಕ್ಷ ಹಾಕಿದ್ದಾರಾ? 2 ಕೋಟಿ ಉದ್ಯೋಗ ಸೃಷ್ಟಿಸಿದ್ದಾರಾ? ಚುನಾವಣಾ ಬಾಂಡ್‌ ಹೆಸರಲ್ಲಿ ದೇಶದಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿರುವ ಬಗ್ಗೆ ಮಾತಾನಾಡಿ ನೋಡೋಣ.

ಸನ್ಮಾನ್ಯ ಯತ್ನಾಳ್‌ ಅವರೇ ನಿಮಗೆ ಸಮಯವಿದ್ದರೆ ಬನ್ನಿ, ನಿಮ್ಮ ವಿಶ್ವಗುರು ಮೋದಿಯವರ 10 ವರ್ಷಗಳ ಆಡಳಿತದ ಅವಾಂತರಗಳ ಬಗ್ಗೆ ಮಾತನಾಡೋಣ. ದೇಶದಲ್ಲಿ ಬಿಜೆಪಿ ಸರ್ಕಾರದಿಂದ ಆಗಿರುವ ಅನಾಹುತಗಳ ಬಗ್ಗೆ ಮಾತನಾಡೋಣ. ಈ ರೀತಿಯಾಗಿ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ

About The Author