ವರ್ಷದ ಆರಂಭದಲ್ಲೇ ವಕ್ಕರಿಸಿದ ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ಹಾಳು ಮಾಡಿ ಬಿಟ್ಟಿದೆ. ಕೊರೊನಾ ಎಂಬುದು ಜೀವನದ ಒಂದು ಭಾಗವಾಗಿಬಿಟ್ಟಿದೆ. ಎಲ್ಲಿ ಹೋದರೂ ಜನ ಭಯದಲ್ಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಇಂಥ ಕೊರೊನಾ ವಿರುದ್ಧ ವೈದ್ಯರು ಸಮರ ಸಾರಿದ್ದಾರೆ.

ವಿದೇಶದಿಂದ, ಬೇರೆ ರಾಜ್ಯದಿಂದ ಬಂದವರಲ್ಲೇ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಬೆಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳೂ ಕೂಡ ಈ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿದೆ. ಬೆಂಗಳೂರಿನ ಪ್ರತಿಷ್ಠಿತ ರಾಜಶೇಖರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಿಬ್ಬಂದಿಗಳು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದ್ದಾರೆ. 6 ಜನರ ತಂಡ ಒಂದು ತಿಂಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಿದ್ದಾರೆ.
ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಸಾರ್ವಜನಿಕ ಸೇವೆಗಳನ್ನು ಮಾಡಿ ಬಂದ ಸಿಬ್ಬಂದಿಗಳನ್ನು ಆಸ್ಪತ್ರೆಯ ಮುಖ್ಯಸ್ಥ ಡಾ. ರಮೇಶ್ ಸೋಮಯಾಜಿ ಹೆಮ್ಮೆಯಿಂದ ಬರ ಮಾಡಿಕೊಂಡರು. ಇದೆ ಸಂದರ್ಭದಲ್ಲಿ ಮಾತನಾಡಿ ನಮ್ಮ ಆಸ್ಪತ್ರೆಯು ಜನ ಸೇವೆಗೆ ಸದಾ ಸಿದ್ದ ಎಂದು ಹೇಳಿದ್ರು.
ಅಲ್ಲದೇ, ಮುಂದಿನ ದಿನಗಳಲ್ಲೂ ನಮ್ಮ ಸಿಬ್ಬಂದಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಲು ಸದಾ ಸಿದ್ಧರಿರುತ್ತೇವೆ ಎಂದಿದ್ದಾರೆ.
ಇನ್ನು ಸತತವಾಗಿ ಒಂದು ತಿಂಗಳು ಸ್ಕ್ರೀನಿಂಗ್ ಮಾಡಿದ ಆಸ್ಪತ್ರೆ ಸಿಬ್ಬಂದಿಗಳು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.
