- Advertisement -
Political News: ಹುಬ್ಬಳ್ಳಿಯ ನೇಹಾ ಕೊಲೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಷ್ ಬೇಸರ ಹೊರಹಾಕಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಕಳವಳಕಾರಿಯಾಗಿದೆ. ಅವರ ಕುಟುಂಬದ ದುಃಖದಲ್ಲಿ ಓರ್ವ ಹೆಣ್ಣಾಗಿ, ತಾಯಿಯಾಗಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಕುಟುಂಬದ ಕುಡಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ಅವರಿಗೆ ಸ್ಥೈರ್ಯ ತುಂಬುವ ಕೆಲಸ ನಡೆಯಬೇಕೇ ವಿನಃ, ಅನಗತ್ಯ ಮಾತುಗಳು ಹಾಗೂ ತಿರುಚಿದ ವೀಡಿಯೊಗಳನ್ನು ಹಂಚಿ ಆರೋಪಿಯ ರಕ್ಷಣೆ ಮಾಡುವ ಯತ್ನ ನಡೆಯುತ್ತಿರುವುದು ಖಂಡನೀಯ ಎಂದು ಸುಮಲತಾ ಹೇಳಿದ್ದಾರೆ.
ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ಫಲವಾಗಿ ಇಂತಹ ಸಮಾಜಘಾತುಕ ಕೃತ್ಯಗಳು ಕಾನೂನಿನ ಭಯವಿಲ್ಲದೇ ನಡೆಯುತ್ತಿವೆ. ಅಪರಾಧಿಯನ್ನು ಕೂಲಂಕಷ ತನಿಖೆಗೆ ಒಳಪಡಿಸಿ, ಶಿಕ್ಷೆ ನೀಡಬೇಕು. ಆ ಹೆಣ್ಣು ಮಗಳ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ.
ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?
ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್
ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ
ನೇಹಾ ಹ* ಕೇಸ್: ಫಯಾಜ್ ರುಂ*ಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ
- Advertisement -