Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಬಂಗಾರಪೇಟೆ ರೋಡ್ ಶೋ ವೇಳೆ ಪ್ರಶ್ನಿಸಿದ್ದಾರೆ.
ಕೋಲಾರದ ಬಂಗಾಪೇಟೆ ಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರವಾಗಿ ಮತಯಾಚನೆ ನಡೆಸಿ ಬಂಗಾರಪೇಟೆ ನಗರದ ಮುಖ್ಯ ರಸ್ತೆಯ ಸುಮಾರು ಎರಡು ಕಿಲೋಮೀಟರ್ ಗೂ ಅಧಿಕ ದೂರ ರೋಡ್ ಶೋನಲ್ಲಿ ಭಾಗಿಯಾಗಿದ್ದರು , ಬಿರು ಬಿಸಿಲಿನ ನಡುವೆಯೂ ರೋಡ್ ಶೋ ನಲ್ಲಿ ಸಾವಿರಾರುಜನ ಬಾಗಿಯಾಗಿಯಾಗಿದ್ದರು , ಇನ್ನು ಸಿಎಂ ಆಗಮನದ ಹಿನ್ನೆಲೆ ಸರ್ಕಾರಿ ಆಸ್ಪತ್ರೆ ವೃತ್ತದಲ್ಲಿ ಬೃಹತ್ ಸೇಬಿನ ಹಾರವನ್ನು ಸಮರ್ಪಿಸಲಾಯಿತು , ಸಿಎಂ ರೋಡ್ ಶೋ ವಾಹನ ಮುಂದೆ ಸಾಗುತ್ತಿದ್ದಂತೆ ಸೇಬಿನ ಹಾರಕ್ಕೆ ಮುಗಿಬಿದ್ದ ಜನರು ಕೆಲವೇ ಕ್ಷಣಗಳಲ್ಲಿ ಸೇಬಿನ ಹಾರವನ್ನು ನಾ ಮುಂದು ತಾ ಮುಂದು ಎಂದು ಖಾಲಿಮಾಡಿದರು.
ರೋಡ್ ಶೋ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?, ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶಿಸಿದ್ದಾರೆ.
ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆವಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ
ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

