Sunday, December 22, 2024

Latest Posts

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

- Advertisement -

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಸಿದ್ದಾರೆ.

ಇನ್ನು ಬಂಧಿತರಿಂದ ಒಂದು ಕಂಟ್ರಿ ಪಿಸ್ತೂಲ್ (ಆರು ಜೀವಂತ ಗುಂಡುಗಳು) ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳ ಮೇಲೆ ಬೇರೆ ಬೇರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿವೆ ಎನ್ನಲಾಗಿದೆ. ಈ ಕುರಿತು ಗೋಕುಲ ರೋಡ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಎಸಿಪಿ ಎಸ್.ಪಿ ಒಡೆಯರ್, ಪಿಎಸ್ಐ ದೇವೆಂದ್ರಪ್ಪ, ಸಿಸಿಬಿ ಇನ್ಸ್ಪೆಕ್ಟರ್ ಮಾರುತಿ ಗುಳ್ಳಾರಿ, ಎ.ಎಸ್ಐ ಲಂಗೋಟಿ, ಧಾರವಾಡ, ಭಜಂತ್ರಿ, ಹುಗ್ಗಿ, ಕುರಿ, ರಾಜೇಸಾಬ ಗುಂಜಾಳ, ಎಸ್.ಐ ಕಡೇಮನಿ ಸೇರಿದಂತೆ ಭಾಗಿಯಾಗಿದ್ದರು.

ನಿರಂಜನ ಅವರ ಮಗಳು ಸತ್ತಿಲ್ಲ. ನಮ್ಮ‌ ಸಹೋದರಿ ತೀರಿ ಹೋಗಿದ್ದಾಳೆ: ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ

ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss