ತಾವು ಬರದೇ ಏಜೆಂಟರ್‌ ಮೂಲಕ ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

Dharwad News: ಧಾರವಾಡ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ತೊಡೆ ತಟ್ಟಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬಂದ ಸ್ವಾಮೀಜಿ ಜಿಲ್ಲಾಧಿಕಾರಿ ಕಚೇರಿಗೆ ತಾವು ಬರದೇ ತಮ್ಮ ಅಧಿಕೃತ ಏಜೆಂಟ್ ಸಚಿನ್ ಪಾಟೀಲ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದಾರೆ.

ಗುರುಗಳ ಆದೇಶದ ಪ್ರಕಾರ ನಾವು ನಾಮಪತ್ರ ವಾಪಸ್ ಪಡೆದಿದ್ದೇವೆ. ಅವರು ಯಾವ ಕಾರಣಕ್ಕೆ ವಾಪಸ್ ಪಡೆದರೋ ಗೊತ್ತಿಲ್ಲ. ಅದನ್ನು ಅವರನ್ನೇ ಕೇಳಬೇಕು ಎಂದು ಏಜೆಂಟ್ ಸಚಿನ್ ಪಾಟೀಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಒಂದು ಕಡೆ ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಸಚಿವ ಸಂತೋಷ ಲಾಡ್ ಅವರು ಗೌಪ್ಯ ಸಭೆ ನಡೆಸಿದ್ದಾರೆ ಎಂದು ಗೊತ್ತಾಗಿದ್ದು, ದಿಂಗಾಲೇಶ್ವರ ಶ್ರೀಗಳು ಸದ್ಯ ಏಜೆಂಟರ ಮೂಲಕ ನಾಮಪತ್ರ ವಾಪಸ್ ಪಡೆದಿದ್ದು, ಅವರ ಮುಂದಿನ ನಡೆ ಏನಾಗಿರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

ನೇಹಾ ಕೊಲೆಗಾರರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ: ಸ್ವಪಕ್ಷದ ಕಾರ್ಪೊರೇಟರ್ನಿಂದಲೇ ಆರೋಪ

ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..

About The Author